User:Chaluvaraju Alnahalli
Category:Social worker Category:Social workers social worker for Mysore In Karnataka
ಸಾಮಾಜಿಕ ಕಾರ್ಯಕರ್ತ
ಸಮಾಜಸೇವೆ
[edit]About me
[edit]Gender | Male |
---|---|
Industry | social worker |
Occupation | social worker |
Location | Mysore Karnataka, India |
Introduction | ನನ್ನ ಪೂರ್ಣ ಹೆಸರು Chaluvaraju Aalnahalli ಕನ್ನಡದ ಹೋರಾಟಗಾರ
HD Kote Tq Mysore Dist 570026 |
Interests | Latest Gadgets, Technology and its Article. ಕನ್ನಡದ ಬೆಳವಣಿಗೆಗೆ ಸಹಕರಿಸುವುದು |
Favourite Films | Black, Hitch, 300, Blood Diamond, Enemy Behind Lines, ಬಂಗಾರದ ಮನುಷ್ಯ, ನಾಗರಹಾವು,ಬಬ್ರುವಾಹನ, ಓಂ, ಆ ದಿನಗಳು |
Favourite Music | ಕನ್ನಡ, ಹಿಂದಿ ಮತ್ತು ಇತರ ಭಾರತೀಯ ಚಿತ್ರ ಗೀತೆಗಳು Hindi, Kannada and Other Indian popular songs |
Favourite Books | ಮುಸ್ಸಂಜೆಯ ಕಥಾ ಪ್ರಸಂಗ |
ಸಮಸ್ಯೆ, ಅವಕಾಶ ಹಾಗೂ multiple right answers
[edit]ರಾಜಕಾರಣ, ಲಂಚ, ರಾಜಕೀಯ, ಭ್ರಷ್ಟಾಚಾರ ಇವೆಲ್ಲವನ್ನೂ ಬುದ್ಧಿವಂತ ಜನತೆ ಒಂದು ರೀತಿಯ ಅಲರ್ಜಿಯಿಂದ ನೋಡುತ್ತದೆ, ಹೇಸಿಗೆ ಮಾಡಿಕೊಳ್ಳುತ್ತದೆ. ’ಇವೆಲ್ಲ ನಮಗಲ್ಲ’ ಎಂದುಕೊಂಡು ಕೈ ತೊಳೆದುಕೊಳ್ಳಲು ನೋಡುತ್ತದೆ. ನಮ್ಮ ಜೀವನದಲ್ಲಿ ಸಾಂಸ್ಕೃತಿಕವಾಗಿ ಬೆಳವಣಿಗೆಗಳು ಇದ್ದಂತೆ ರಾಜಕೀಯವಾಗಿಯೂ ನಾವು ಸಮಾಜದಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವುದು ಎಷ್ಟು ಮುಖ್ಯ ಎಂದು ನಾನು ಹೆಚ್ಚು ಆಲೋಚಿಸಲು ತೊಡಗಿದ್ದು ದೇಶ ಬಿಟ್ಟು ದೇಶಕ್ಕೆ ಬಂದಾಗಲೆ. ಒಂದು ಕಾಲದಲ್ಲಿ ನನ್ನ ಹುಟ್ಟೂರಾದ ಆನವಟ್ಟಿಯ ಗ್ರಾಮಪಂಚಾಯತಿಯನ್ನು ಸೇರಿಕೊಂಡು ಅಲ್ಲಿನ ಸ್ಥಳೀಯ ಕೆಲಸಗಳಲ್ಲಿ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳಲ್ಲಿ ನನ್ನನ್ನು ನಾನು ತೊಡಗಿಸಿಕೊಳ್ಳಬೇಕು ಎನ್ನುವುದು ಯಾವತ್ತೂ ನನಸಾಗಲೇ ಇಲ್ಲ - ಹಲವಾರು ಕಾರಣಗಳಿಂದಾಗಿ. ಶಾಲಾ ದಿನಗಳಲ್ಲಿ ರಾಜಕೀಯವಾಗಿ ಸಕ್ರಿಯವಾಗಿ ತೊಡಗಿಕೊಂಡು ಹೈ ಸ್ಕೂಲಿನವರೆಗೂ ಅನೇಕ ’ಮಂತ್ರಿ’, ’ನಾಯಕ’ ಪದವಿಗಳನ್ನು ಪಡೆದುಕೊಂಡು ಒಮ್ಮೆ ಹೈ ಸ್ಕೂಲು ಬಿಟ್ಟು ಕಾಲೇಜು ಸೇರಿಕೊಂಡ ಮೇಲೆ ನನ್ನಲ್ಲಿನ ರಾಜಕೀಯ ಉತ್ಸಾಹವೆಲ್ಲ ಸೂಜಿ ಚುಚ್ಚಿದ ಬೆಲೂನಿನ ಗಾಳಿಯಂತೆ ಖಾಲಿಯಾಗಿ ಹೋಯಿತು. ಮುಂದೆ ತಿಳುವಳಿಕೆ ಬೆಳೆದಂತೆಲ್ಲ ಒಂದು ಕ್ಷೇತ್ರದ ರೆಪ್ರೆಸೆಂಟೇಟಿವ್ ಆಗಲು ಏನೇನೆಲ್ಲ ಪೂರಕ ಅಂಶಗಳು ಬೇಕು ಎಂಬುದನ್ನು ಮನಗಂಡ ನಂತರ ಮುಂದೆ ಎಂದೂ ಈ ರಾಜಕೀಯಕ್ಕೆ ಕೈ ಹಾಕಲೇ ಬಾರದು ಎನ್ನುವಲ್ಲಿಯವರೆಗೆ ಬಂದು ನಿಂತಿದೆ.
*** ನಮ್ಮಲ್ಲಿನ ಅಂದರೆ ಭಾರತದಲ್ಲಿನ ಅನೇಕ ಮೂಲಭೂತ ಸಮಸ್ಯೆಗಳನ್ನು ಅವುಗಳಿಗೆ ಸಂಬಂಧಿಸಿದ ವಿಷಯಗಳನ್ನು ಈ ಪ್ರಶ್ನೆಯಿಂದ ಅರ್ಥೈಸಬಹುದು ಅಥವಾ ವೀಕ್ಷಿಸಬಹುದು - Can you take a "No" for an answer?
ನಮ್ಮಲ್ಲಿ ಈಗ ಚಾಲ್ತಿಯಲ್ಲಿರುವ ಯಾವುದೋ ಒಂದು ವ್ಯವಸ್ಥೆ ಅಥವಾ ಪ್ರಾಸೆಸ್ಸನ್ನು ತೆಗೆದುಕೊಂಡು ಅದರ ಬಗ್ಗೆ ಚರ್ಚೆ ಮಾಡಿಕೊಂಡರೆ ಸುಲಭವಾದೀತು. ಉದಾಹರಣೆಗೆ ಯಾವುದೋ ಒಂದು ಕಾಲೇಜಿನ ಅಡ್ಮಿಷನ್ನ್ ಗೆ ಈಗಾಗಲೇ ಕೊನೇ ದಿನವಾಗಿ ಹೋಗಿದೆ ಎಂದುಕೊಳ್ಳೋಣ. ನೀವು ನಿಮ್ಮ ವಿದ್ಯಾರ್ಥಿಯನ್ನು ಆ ಕಾಲೇಜಿಗೆ ಸೇರಿಸಲು ಹೋಗುತ್ತೀರಿ. ಅಲ್ಲಿನ ಗುಮಾಸ್ತರು ’ಕ್ಷಮಿಸಿ, ಈಗಾಗಲೇ ಡೆಡ್‌ಲೈನ್ ಮುಗಿದಿದೆ’ ಎನ್ನುತಾರೆ. ಆಗ ನೀವೇನು ಮಾಡುತ್ತೀರಿ? ಆ ವ್ಯವಸ್ಥೆಯನ್ನು ಒಪ್ಪಿಕೊಂಡು ಸುಮ್ಮನೇ ಹಿಂತಿರುಗುತ್ತೀರೋ? ಅಥವಾ ಡೆಡ್‌ಲೈನ್ ಮುಗಿದ ಮೇಲೆಯೂ ಬೇರೆ ಯಾವುದಾದರೂ ನ್ಯಾಯವಾದ ದಾರಿಗಳಿವೆಯೇ (alternatives) ಎಂದು ಹುಡುಕುತ್ತೀರೋ? ಅಥವಾ ಡೆಡ್‌ಲೈನ್ ಮುಗಿದ ಮೇಲೆಯೂ ನಿಮ್ಮ ಶಿಫಾರಸ್ಸಿನಿಂದ ಅಥವಾ ಲಂಚಕೊಡುವ ಮೂಲಕ ಅಥವಾ ಮತ್ತ್ಯಾವುದೋ ’ನ್ಯಾಯವಲ್ಲದ’ ದಾರಿಗಳಿವೆಯೇ ಎಂದು ಹುಡುಕುತ್ತೀರೋ?
ಹೀಗೇ, ನಮ್ಮಲ್ಲಿ ನಾವು ಅನುಭವಿಸುವ ಪ್ರತಿಯೊಂದು ಸಂಕಷ್ಟ, ನೋವು, ನಲಿವು, ಅವಕಾಶ (opportunity) ಹಾಗೂ ಸವಾಲುಗಳಿಗೆ ಹಲವಾರು ಉತ್ತರಗಳಿವೆ - there are multiple right answers ಅಂತಾರಲ್ಲ ಹಾಗೆ. ಆದರೆ ಅವುಗಳನ್ನು ನಾವು ನೋಡೋ ದೃಷ್ಟಿಕೋನ ಬದಲಾಗಬೇಕು ಅಷ್ಟೇ.
***
ನಮ್ಮ ರಾಜಕಾರಣಿಗಳು ಅಂದರೆ ಬುದ್ಧಿವಂತ ಜನ ಮೂಗು ಮುರಿಯಬೇಕೇಕೆ? ಅವರು ಹೇಗಿದ್ದರೂ ಹೇಗಾದರೂ ನಮ್ಮ ಪ್ರತಿನಿಧಿಗಳೇ ಅಲ್ಲವೇ? ನಾವು ಎಲ್ಲ ರೀತಿಯಿಂದ ಚೆನ್ನಾಗಿದ್ದು ನಮ್ಮ ಪ್ರತಿನಿಧಿಗಳು ಸರಿಯಾಗಿಲ್ಲವೆಂದರೆ ಅದಾದರೂ ಒಂದು ವಾದವಾದೀತು. ನಮ್ಮ ಸಮಾಜದಲ್ಲಿ ಹಲವು ರೀತಿಯ ಜನರು ಇರೋದು ಸಹಜವಾದಲ್ಲಿ, ಅಂತಹವರನ್ನು ರೆಪ್ರೆಸೆಂಟ್ ಮಾಡುವವರು ಎಲ್ಲರಿಗೂ ಸ್ಪಂದಿಸಬೇಕಾದಲ್ಲಿ ನಮ್ಮ ನಾಯಕರು ಈಗಿರುವುದಕ್ಕಿಂತ ಭಿನ್ನರಾಗಲು ಸಾಧ್ಯವೇ ಇಲ್ಲ. ಯಾರೇ ವಿಧಾನಸೌಧಕ್ಕೋ ಅಥವಾ ಪಾರ್ಲಿಮೆಂಟಿನ ಒಳಗೆ ನುಗ್ಗಿ ಅಲ್ಲಿನ ಈಗಿನ ರಾಜಕಾರಣಿಗಳನ್ನೆಲ್ಲ ನಾಶ ಮಾಡಿದರೂ ಎಂದೇ ಇಟ್ಟುಕೊಳ್ಳಿ, ಆ ಪಾಯಿಂಟಿನಿಂದ ಮುಂದೆ ಬರುವ ಹೊಸ ರಾಜಕಾರಣಿಗಳು ಈಗಿನವರಿಗಿಂತ ಅದೆಷ್ಟು ಭಿನ್ನರಾಗಿರಬಲ್ಲರು ಎನ್ನುವುದು ಪ್ರಶ್ನಾರ್ಥಕ ವಿಚಾರ. ನನ್ನ ಪ್ರಕಾರ ಒಬ್ಬ ಸಾದು-ಸಂತನನ್ನು ನಮ್ಮೂರಿನ ತಾಲ್ಲೂಕು ಆಫೀಸಿನಲ್ಲಿ ಕೂರಿಸಿದರೂ ಅವನಿಗೆ ಜನರು ಲಂಚದ ಆಮಿಷ ಒಡ್ಡೇ ಒಡ್ಡುತ್ತಾರೆ. ಜೊತೆಗೆ ತಾಲ್ಲೂಕು ಆಫೀಸು, ರಿಜಿಸ್ಟ್ರಾರ್ ಆಫೀಸಿನಲ್ಲಿ ಕೆಲಸ ಮಾಡುವವರೂ ನಮ್ಮ ಸಮಾಜದ ಒಂದು ಅವಿಭಾಜ್ಯ ಅಂಗದ ಸದಸ್ಯರು ಎನ್ನುವುದನ್ನು ನಾವು ಹೇಗೆ ತಾನೇ ಮರೆಯಲಾದೀತು?
ನಮ್ಮ ಕಾನೂನು-ಕಟ್ಟಳೆಗಳು ಹಳೆಯದಾಗಿರಬಹುದು, ಇವತ್ತಿಗೂ ನಮ್ಮೂರಿನ ರಿಯಲ್ ಎಸ್ಟೇಟ್ ಪ್ರಾಪರ್ಟಿಗಳು ಓಬೀರಾಯನ ಕಾಲದ ಮೌಲ್ಯವನ್ನು ತಾಲೂಕು ಆಫೀಸಿನ, ಗ್ರಾಮ ಪಂಚಾಯತಿಯ ರೆಕಾರ್ಡುಗಳಲ್ಲಿ ಬಿಂಬಿಸುತ್ತಿರಬಹುದು. ಇಂದು ನೀವು ಕೊಡುತ್ತಿರುವ ಕಂದಾಯ ಆಯಾ ಪಟ್ಟಣದ ಅಭಿವೃದ್ಧಿಗೆ ಮೀಸಲಾದ ಬಜೆಟ್ಟಿನಲ್ಲಿ ಯಾವುದೇ ಮಹತ್ವದ ಪಾತ್ರವನ್ನು ವಹಿಸುವಲ್ಲಿ ಬಹಳ ಚಿಕ್ಕದಾಗಿ ತೋರಬಹುದು. ನಾವು ಕೊಡುತ್ತಿರುವ ಕಂದಾಯ ಅಷ್ಟೇ ಇರಲಿ, ಆದರೆ ನಮ್ಮೂರಿನ ಅಭಿವೃದ್ಧಿ ಆಗಲಿ ಎಂದರೆ ಹೇಗೆ ಸಾಧ್ಯ? ಸರ್ಕಾರ ಎಲ್ಲದಕ್ಕೂ ದುಡ್ಡು ಕೊಡಲಿ ಅಂದರೆ ಅದು ಯಾರ ಹಣ, ಅದಕ್ಕೆ ಮೂಲ ಆದಾಯ ಎಲ್ಲಿಂದ ಬರಬೇಕು? ಸರಿಯಾಗಿ ತೆರಿಗೆ ಕಟ್ಟುವವರಿಂದ ಹಣ ವಸೂಲಿ ಮಾಡುವ ವ್ಯವಸ್ಥೆ ತೆರಿಗೆ ಕಟ್ಟದೇ ಬದುಕುವ ಅದೆಷ್ಟೋ ಕೋಟಿ ಜನರನ್ನು ಹೇಗೆ ಸಂತೈಸಲು ಸಾಧ್ಯ? ಪ್ರತಿ ಊರಿನ, ಗ್ರಾಮದ, ಪಟ್ಟಣದ, ನಗರದ ಬೆಳವಣಿಗೆಗೆ ತಕ್ಕಂತೆ ಅಲ್ಲಿನ ಬಜೆಟ್ ಬೆಳೆಯುತ್ತಿದೆಯೇ? ಒಂದು ಐಸ್ ಕ್ಯೂಬ್‌ನಂತೆ ಇದ್ದಲ್ಲೇ ಕರಗುವ ಹಣದ ಗಂಟು ಈ ಬೆಳವಣಿಗೆಗಳು ಒಡ್ಡುವ ಸವಾಲುಗಳನ್ನು ಅದೆಷ್ಟರ ಮಟ್ಟಿಗೆ ಎದುರಿಸ ಬಲ್ಲದು?